
86 ವರ್ಷದ ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ತೀವ್ರ ವೈರಲ್ ಸೋಂಕು ಮತ್ತು ನಿರ್ಜಲೀಕರಣದಿಂದ ಬಳಲುತ್ತಿದ್ದು, ಮುಂಬೈನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೈದ್ಯರ ತಂಡವು ಅವರ ಆರೋಗ್ಯವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಭ್ರಷ್ಟಾಚಾರ ವಿರೋಧಿ ಚಳವಳಿಗಳ ಮೂಲಕ ದೇಶಾದ್ಯಂತ ಹೆಸರುವಾಸಿಯಾಗಿರುವ ಹಜಾರೆ, ಇತ್ತೀಚೆಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ್ದರು.