
ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಸೋಮವಾರ ಬೆಂಗಳೂರಿನ ಕೆಪಿಎಸ್ಸಿ ಕಚೇರಿಯ ಮೇಲೆ ದಾಳಿ ನಡೆಸಿ ಮಹತ್ವದ ಕಡತಗಳನ್ನು ವಶಪಡಿಸಿಕೊಂಡಿದ್ದಾರೆ.
ತನಿಖಾ ತಂಡವು 329 ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಜಪ್ತಿ ಮಾಡಿದ್ದು, ಅಕ್ರಮ ಪತ್ತೆಗೆ ಇವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿದ್ದು, ಶೀಘ್ರದಲ್ಲೇ ಅನುಮಾನಾಸ್ಪದ ಅಧಿಕಾರಿಗಳು ಮತ್ತು ಅಭ್ಯರ್ಥಿಗಳಿಗೆ ನೋಟಿಸ್ ನೀಡಲು ಸಿಐಡಿ ಸಿದ್ಧತೆ ನಡೆಸಿದೆ.