
ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮತ್ತು ಅವರ ಮೂವರು ಸಹೋದರರ ವಿರುದ್ಧ 11 ವರ್ಷಗಳ ಹಿಂದೆ ದಾಖಲಾಗಿದ್ದ ಕೋಟ್ಯಂತರ ರೂ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಇದೀಗ ಮತ್ತೆ ಜೀವ ಬಂದಿದೆ.
ದೂರುದಾರ ಗುರುಪಾದಯ್ಯ ಮಠದ ಅವರು 2015ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಲೋಕಾಯುಕ್ತ ಅಧಿಕಾರಿಗಳು ಈಗಾಗಲೇ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ರೇಣುಕಾಚಾರ್ಯ ಮಾಜಿ ಜನಪ್ರತಿನಿಧಿಯಾಗಿರುವುದರಿಂದ ಅವರ ವಿಚಾರಣೆಗೆ ಸರ್ಕಾರದ ಪ್ರಾಸಿಕ್ಯೂಷನ್ ಅನುಮತಿ ಅನಗತ್ಯ ಎಂದು ಮಠದ ಹೇಳಿದ್ದು, ವಿಳಂಬವಾದರೆ ಹೈಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ.