
ಕಾವೇರಿ ಮತ್ತು ಮಹದಾಯಿ ವಿವಾದಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುತ್ತಿಲ್ಲ ಎಂದು ಆರೋಪಿಸಿ ವಾಟಾಳ್ ನಾಗರಾಜ್ ಕರ್ನಾಟಕದ 28 ಸಂಸದರ ಭಾವಚಿತ್ರಗಳನ್ನು ಬಹಿರಂಗವಾಗಿ ಹರಾಜು ಹಾಕಿದರು.
ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಸಂಸದ ಡಾ. ಮಂಜುನಾಥ್ ಅವರ ಭಾವಚಿತ್ರಕ್ಕೆ 20 ರೂ. ಹಾಗೂ ಪ್ರಭಾ ಮಲ್ಲಿಕಾರ್ಜುನ ಅವರ ಭಾವಚಿತ್ರಕ್ಕೆ 2 ರೂ. ಬೆಲೆ ನಿಗದಿಪಡಿಸಲಾಗಿತ್ತು.
ರಾಜ್ಯದ ಹಿತಾಸಕ್ತಿಗಾಗಿ ಪಕ್ಷಭೇದ ಮರೆತು ಎಲ್ಲ ಸಂಸದರು ಒಗ್ಗಟ್ಟಿನಿಂದ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದರು.