Education
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಯಶಸ್ವಿ: ಕೆಇಎ ಸ್ಪಷ್ಟನೆ

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಯಶಸ್ವಿ: ಕೆಇಎ ಸ್ಪಷ್ಟನೆ

tv9kannada2h
THE BRIEF
1

ರಾಜ್ಯ ಪೊಲೀಸ್ ಇಲಾಖೆಯ 3991 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನಡೆದ ಪರೀಕ್ಷೆ ಸುಗಮವಾಗಿ ನಡೆದಿದ್ದು, ಉಳಿಕೆ ಮೂಲ ವೃಂದಕ್ಕೆ ಶೇ. 92.52 ಹಾಗೂ ಕಲ್ಯಾಣ ಕರ್ನಾಟಕ ವೃಂದಕ್ಕೆ ಶೇ. 94ರಷ್ಟು ಹಾಜರಾತಿ ದಾಖಲಾಗಿದೆ.

2

ಒಎಂಆರ್ ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಕ್ರಮಸಂಖ್ಯೆ ಒಂದೇ ಆಗಿರಬೇಕಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದ್ದು, ಗೊಂದಲ ಸೃಷ್ಟಿಸಿದವರ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದೆ.

3

ವಿಜಯಪುರದ ತಿಕೋಟಾ ಕೇಂದ್ರದಲ್ಲಿ ಪರೀಕ್ಷಾ ಸಾಮಗ್ರಿಯೊಂದಿಗೆ ಕಾಂಪೌಂಡ್ ಹಾರಿ ಪರಾರಿಯಾದ ಅಭ್ಯರ್ಥಿಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ಕೇಳಲಾಗಿದೆ ಎಂದು ಕೆಇಎ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.