
ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ 2,000 ರೂಪಾಯಿ ಪಡೆಯಲು ರೈತರು ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಮಾಡಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕರ್ನಾಟಕದಲ್ಲಿ ಒಟ್ಟು 41.54 ಲಕ್ಷ ಫಲಾನುಭವಿಗಳಿದ್ದು, ಬೆಳಗಾವಿ ಜಿಲ್ಲೆಯೊಂದರಲ್ಲೇ 5.38 ಲಕ್ಷ ರೈತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗಲಿರುವ ಈ ಕಂತಿನ ಹಣವನ್ನು ನೇರವಾಗಿ ಆಧಾರ್ ಲಿಂಕ್ ಆದ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ.