
ರಾಜ್ಯದಲ್ಲಿ ಅಕ್ಟೋಬರ್ 16 ರಿಂದ 18ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.
ಈ ಅವಧಿಯಲ್ಲಿ ಗಂಟೆಗೆ 40 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಕರಾವಳಿ ಆಂಧ್ರ ಮತ್ತು ತಮಿಳುನಾಡಿನಲ್ಲೂ ಮಳೆಯ ಮುನ್ಸೂಚನೆ ಇದೆ.