
ಕೇಂದ್ರ ಸರ್ಕಾರ ಘೋಷಿಸಿರುವ 7 ರೈಲ್ವೆ ಮಾರ್ಗಗಳ ಚತುಷ್ಪಥ ಮೇಲ್ದರ್ಜೆಗೇರಿಸುವ ಯೋಜನೆಯಲ್ಲಿ ಕರ್ನಾಟಕದ ಒಂದೇ ಒಂದು ಮಾರ್ಗವನ್ನು ಪರಿಗಣಿಸದಿರುವುದು ಅನ್ಯಾಯ ಎಂದು ಸಚಿವ ಎಂ.ಬಿ. ಪಾಟೀಲ ಟೀಕಿಸಿದ್ದಾರೆ.
ಬೆಂಗಳೂರು-ಪುಣೆ-ಮುಂಬೈ ಮತ್ತು ಬೆಂಗಳೂರು-ಮೈಸೂರು ಸೇರಿದಂತೆ ರಾಜ್ಯದ ಹತ್ತಾರು ಅತಿದಟ್ಟಣೆಯ ಮಾರ್ಗಗಳನ್ನು ಅಭಿವೃದ್ಧಿಪಡಿಸಬೇಕೆಂದು ಅವರು ಕೇಂದ್ರಕ್ಕೆ ಆಗ್ರಹಿಸಿದ್ದಾರೆ.
ರಾಜ್ಯದ ಅಭಿವೃದ್ಧಿಗಾಗಿ 50:50 ವೆಚ್ಚ ಹಂಚಿಕೆ ಆಧಾರದಲ್ಲಿ ಸಹಕರಿಸುತ್ತಿದ್ದರೂ, ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.