
ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲು ಮತ್ತು ಬಸ್ ಟಿಕೆಟ್ ದರ ಏರಿಕೆಗೆ ಒಪ್ಪಿಗೆ ದೊರೆತಿದ್ದು, ಹಾಲಿನ ದರ ಪ್ರತಿ ಲೀಟರ್ಗೆ 8 ರೂಪಾಯಿ ಹೆಚ್ಚಳವಾಗುವ ಸಾಧ್ಯತೆಯಿದೆ.
ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಬಸ್ ಟಿಕೆಟ್ ದರ ಏರಿಕೆಗೆ ಪಟ್ಟು ಹಿಡಿದಿವೆ.
ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಅಕ್ಟೋಬರ್ 27ರ ನಂತರ ದರ ಹೆಚ್ಚಳ ಜಾರಿಯಾಗುವ ನಿರೀಕ್ಷೆಯಿದೆ.