
ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆಗಾಗಿ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 30 ಕಡೆಗಳಲ್ಲಿ ವಿಶೇಷ ದಾಳಿ ನಡೆಸಿದ್ದಾರೆ.
ಕಾರ್ಯಾಚರಣೆ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಸುಮಾರು 40 ಮಂದಿಯನ್ನು ವಶಕ್ಕೆ ಪಡೆದು, ಅವರ ಆಧಾರ್, ಪ್ಯಾನ್ ಮತ್ತು ವೋಟರ್ ಐಡಿ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ದಾಖಲೆಗಳಲ್ಲಿ ಗೊಂದಲ ಕಂಡುಬಂದವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಅಕ್ರಮವಾಗಿ ನೆಲೆಸಿರುವುದು ದೃಢಪಟ್ಟರೆ ಎಫ್‌ಆರ್‌ಆರ್‌ಒ ಮೂಲಕ ಅವರನ್ನು ವಾಪಸ್ ಕಳುಹಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.