
2013ರ ಬ್ಯಾಚ್ನ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ಅವರು 13 ವರ್ಷಗಳ ಸೇವೆಯ ನಂತರ ವೈಯಕ್ತಿಕ ಕಾರಣಗಳಿಂದ ಸ್ವಯಂಪ್ರೇರಿತ ರಾಜೀನಾಮೆ ನೀಡಿದ್ದಾರೆ.
ಲಂಡನ್ನಲ್ಲಿ ಕೈತುಂಬಾ ಸಂಬಳದ ಉದ್ಯೋಗ ತೊರೆದು ಭಾರತಕ್ಕೆ ಮರಳಿ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ದಿವ್ಯಾ, ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಅಧಿಕೃತ ಹುದ್ದೆಗೆ ರಾಜೀನಾಮೆ ನೀಡಿದರೂ ದೇಶದ ಅಭಿವೃದ್ಧಿಗಾಗಿ ಜನಸೇವೆಯ ಮಿಷನ್ ಮುಂದುವರಿಸುವುದಾಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕವಾಗಿ ಹಂಚಿಕೊಂಡಿದ್ದಾರೆ.