
ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾದ ಹಿನ್ನೆಲೆಯಲ್ಲಿ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಜೈಲಿಗೆ ಭೇಟಿ ನೀಡಿ ಭದ್ರತೆಯನ್ನು ತೀವ್ರಗೊಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಬ್ಯಾರಕ್ ಸುತ್ತ ಸಿಸಿಟಿವಿ ಕಣ್ಗಾವಲು ಹೆಚ್ಚಿಸಲಾಗಿದ್ದು, ಪವಿತ್ರಾಗೌಡರನ್ನು 16 ಕೈದಿಗಳಿರುವ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ.
ಪ್ರಜ್ವಲ್ ರೇವಣ್ಣ ಅವರಿಗೆ ನೀಡಲಾಗುತ್ತಿದ್ದ ಸವಲತ್ತುಗಳನ್ನು ಸ್ಥಗಿತಗೊಳಿಸಲಾಗಿದ್ದು, ಅವರನ್ನು 22 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್ ಮಾಡಿ ಕಣ್ಗಾವಲು ಬಿಗಿಗೊಳಿಸಲಾಗಿದೆ.