
ಸಹಪಾಠಿಯೊಬ್ಬನಿಗೆ ಹಲ್ಲೆ ಮತ್ತು ಅಪಹರಣ ಮಾಡಿದ ಆರೋಪದ ಮೇಲೆ ದುನಿಯಾ ವಿಜಯ್ ಅವರ ಪುತ್ರ ಸಾಮ್ರಾಟ್ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.
ಕಾರು ಓವರ್ ಟೇಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮ್ರಾಟ್ ಮತ್ತು ಆತನ ಗೆಳೆಯರು ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿತ್ತು.
ತಮ್ಮ ಸಿನಿಮಾ ಪ್ರಚಾರದ ವೇಳೆ ಪ್ರತಿಕ್ರಿಯಿಸಿದ ದುನಿಯಾ ವಿಜಯ್, ನ್ಯಾಯಾಲಯದ ಆದೇಶವನ್ನು ಗೌರವಿಸುವುದಾಗಿ ಮತ್ತು ಮಗನಿಗೆ ಬುದ್ಧಿ ಹೇಳಿರುವುದಾಗಿ ತಿಳಿಸಿದ್ದಾರೆ.