Indian Politics
ಸಚಿವ ಸತೀಶ ಜಾರಕಿಹೊಳಿ ನಿವಾಸದ ಮೇಲೆ ಇ.ಡಿ ದಾಳಿ

ಸಚಿವ ಸತೀಶ ಜಾರಕಿಹೊಳಿ ನಿವಾಸದ ಮೇಲೆ ಇ.ಡಿ ದಾಳಿ

prajavani2h
THE BRIEF
1

ವಿದೇಶಗಳಲ್ಲಿ ಅಕ್ರಮ ಹೂಡಿಕೆ ಆರೋಪದ ಹಿನ್ನೆಲೆಯಲ್ಲಿ ಸಚಿವ ಸತೀಶ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಸೇರಿದಂತೆ ಅವರ ಆಪ್ತರ 18 ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

2

ಫೆಮಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಇ.ಡಿ, ಜಾರಕಿಹೊಳಿ ಕುಟುಂಬದವರು ಆಫ್ರಿಕಾದ ದೇಶವೊಂದರ ಗಣಿ ಮತ್ತು ಸಕ್ಕರೆ ಕಾರ್ಖಾನೆಯಲ್ಲಿ ಹೂಡಿಕೆ ಮಾಡಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ.

3

ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಸಚಿವರ ನಿವಾಸದ ಬಳಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಅಧಿಕಾರಿಗಳು ಲ್ಯಾಪ್‌ಟಾಪ್ ಮತ್ತು ಮೊಬೈಲ್ ದತ್ತಾಂಶಗಳನ್ನು ವಶಕ್ಕೆ ಪಡೆದಿದ್ದಾರೆ.