
ವಿದೇಶಗಳಲ್ಲಿ ಅಕ್ರಮ ಹೂಡಿಕೆ ಆರೋಪದ ಹಿನ್ನೆಲೆಯಲ್ಲಿ ಸಚಿವ ಸತೀಶ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಸೇರಿದಂತೆ ಅವರ ಆಪ್ತರ 18 ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಫೆಮಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಇ.ಡಿ, ಜಾರಕಿಹೊಳಿ ಕುಟುಂಬದವರು ಆಫ್ರಿಕಾದ ದೇಶವೊಂದರ ಗಣಿ ಮತ್ತು ಸಕ್ಕರೆ ಕಾರ್ಖಾನೆಯಲ್ಲಿ ಹೂಡಿಕೆ ಮಾಡಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಸಚಿವರ ನಿವಾಸದ ಬಳಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಅಧಿಕಾರಿಗಳು ಲ್ಯಾಪ್ಟಾಪ್ ಮತ್ತು ಮೊಬೈಲ್ ದತ್ತಾಂಶಗಳನ್ನು ವಶಕ್ಕೆ ಪಡೆದಿದ್ದಾರೆ.