
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆ ಬಳಿ ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನ ಆಳ ತಿಳಿಯದೆ ಮುಳುಗಿ ಮೃತಪಟ್ಟಿದ್ದಾರೆ.
ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಮೃತಪಟ್ಟ ದುರ್ದೈವಿಗಳಾಗಿದ್ದು, ಇವರು ದಟ್ಟ ಕಾಡಿನ ದಾರಿಯಲ್ಲಿ ನಡೆದುಕೊಂಡು ನದಿ ತೀರಕ್ಕೆ ತೆರಳಿದ್ದರು.
ಘಟನಾ ಸ್ಥಳಕ್ಕೆ ವಾಹನ ಸಂಚಾರವಿಲ್ಲದ ಕಾರಣ ಅಗ್ನಿಶಾಮಕ ದಳ ಮತ್ತು ಪೊಲೀಸರು 3 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ತೆರಳಿ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರತೆಗೆದಿದ್ದಾರೆ.