Indian Politics
ಕೆಪಿಎಸ್‌ಸಿ ಅಕ್ರಮ: ಐಎಎಸ್ ಅಧಿಕಾರಿ ಘ್ಯಾನೇಂದ್ರ ಕುಮಾರ್ ಗಂಗ್ವಾರ್ ಅಮಾನತು

ಕೆಪಿಎಸ್‌ಸಿ ಅಕ್ರಮ: ಐಎಎಸ್ ಅಧಿಕಾರಿ ಘ್ಯಾನೇಂದ್ರ ಕುಮಾರ್ ಗಂಗ್ವಾರ್ ಅಮಾನತು

prajavani41m
THE BRIEF
1

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಐಎಎಸ್ ಅಧಿಕಾರಿ ಘ್ಯಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.

2

ಕೆಪಿಎಸ್‌ಸಿಯ ಮಾಜಿ ಪರೀಕ್ಷಾ ನಿಯಂತ್ರಕರಾಗಿದ್ದ ಘ್ಯಾನೇಂದ್ರ ಅವರನ್ನು ಸಿಐಡಿ ಪೊಲೀಸರು ಭಾನುವಾರ ಬಂಧಿಸಿದ್ದು, ತನಿಖೆಗೆ ಸಹಕರಿಸದ ಕಾರಣ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

3

ಅಭ್ಯರ್ಥಿಗಳ ಒಎಂಆರ್ ಪ್ರತಿಗಳನ್ನು ತಿದ್ದಿದ ಆರೋಪ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ 40 ಲಕ್ಷ ರೂ. ವಹಿವಾಟು ನಡೆದಿದೆ ಎಂಬ ಶಂಕೆಯ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.