
ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡು ಪಿಂಡಪ್ರದಾನ ಕಾರ್ಯಕ್ಕೆ ಅಡ್ಡಿಯುಂಟಾಗಿದೆ.
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದ ರಸ್ತೆ ಹಾಗೂ ಮಡಿಕೇರಿ ತಾಲೂಕಿನ ಹೊದವಾಡ ರಸ್ತೆ ಸಂಪೂರ್ಣ ಮುಳುಗಡೆಯಾಗಿವೆ.
ಮೂರ್ನಾಡು-ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಜಿಲ್ಲೆಯ ಹಲವೆಡೆ ನೆರೆ ಪರಿಸ್ಥಿತಿ ನಿರ್ಮಾಣವಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಡಕು ಉಂಟಾಗಿದೆ.