
ನೇಪಾಳದ ಭೋಟೆಕೋಶಿ ಮತ್ತು ತ್ರಿಶೂಲಿ ನದಿ ಪ್ರದೇಶಗಳಲ್ಲಿ ಕಳೆದ 2 ದಿನಗಳಿಂದ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತಕ್ಕೆ 579 ಜನರು ಬಲಿಯಾಗಿದ್ದಾರೆ.
ಪ್ರವಾಹದಲ್ಲಿ 1000ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಇದುವರೆಗೆ 1,545 ಜನರನ್ನು ರಕ್ಷಣಾ ಪಡೆಗಳು ಸುರಕ್ಷಿತವಾಗಿ ಸ್ಥಳಾಂತರಿಸಿವೆ.
ಜಲವಿದ್ಯುತ್ ಯೋಜನೆಯ ಸುರಂಗವೊಂದರಲ್ಲಿ ಸುಮಾರು 100 ಜನರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.