
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸದೆ ದೂರ ಉಳಿದಿದ್ದಾರೆ.
ಆರ್. ಅಶೋಕ್ ಸೇರಿದಂತೆ ಇತರ ಬಿಜೆಪಿ ನಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರೂ, ವಿಜಯೇಂದ್ರ ಅವರು ದೆಹಲಿ ಸಭೆ ಮತ್ತು ಕೋಲಾರದ ಕಾರ್ಯಕ್ರಮಗಳ ನಂತರ ಇದಕ್ಕೂ ಗೈರಾಗಿರುವುದು ಚರ್ಚೆಗೆ ಗ್ರಾಸವಾಗಿದೆ.
ಲೋಕಸಭೆ ಚುನಾವಣೆ ಬಳಿಕ ಮೈತ್ರಿ ಮುಂದುವರಿದಿದ್ದರೂ, ವಿಜಯೇಂದ್ರ ಅವರು ಸತತವಾಗಿ ಜೆಡಿಎಸ್ ಕಾರ್ಯಕ್ರಮಗಳಿಂದ ದೂರ ಉಳಿಯುತ್ತಿರುವುದು ಮೈತ್ರಿ ರಾಜಕಾರಣದ ಸಮೀಕರಣಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.