
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ ತಾಳಗುಪ್ಪ-ಹುಬ್ಬಳ್ಳಿ ಹೊಸ ರೈಲು ಮಾರ್ಗ, ಶಿವಮೊಗ್ಗ-ಮಂಗಳೂರು ರೈಲ್ವೆ ಸಮೀಕ್ಷೆ ಹಾಗೂ ಭದ್ರಾವತಿ-ಚಿಕ್ಕಜಾಜೂರು ಮಾರ್ಗದ ಕುರಿತು ಚರ್ಚಿಸಲಾಗಿದೆ.
ಸೊರಬವನ್ನು ಹೊಸ ರೈಲು ಮಾರ್ಗಕ್ಕೆ ಸೇರಿಸುವಂತೆ ಹಾಗೂ ಭದ್ರಾವತಿ ರೈಲು ನಿಲ್ದಾಣವನ್ನು ಅಮೃತ ಭಾರತ ಯೋಜನೆಯಡಿ ಅಭಿವೃದ್ಧಿಪಡಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದ್ದಾರೆ.