
ಉಳ್ಳಾಲದ ಕೊಲ್ಯದಲ್ಲಿ ಸಾರ್ವಜನಿಕ ಶಾರದಾ ಮಹೋತ್ಸವ ಸಮಿತಿ ವಠಾರದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಉಚಿತ ರೇಬಿಸ್ ನಿರೋಧಕ ಲಸಿಕಾ ಶಿಬಿರ ಹಾಗೂ ದತ್ತು ನೀಡುವ ಕಾರ್ಯಕ್ರಮ ನಡೆಯಿತು.
ಶಿಬಿರದಲ್ಲಿ ಪಶುವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕಿ ಡಾ. ರಚನಾ ಶಿಬಿರ ಉದ್ಘಾಟಿಸಿದ್ದು, ಪರಿಸರದ 146 ಸಾಕು ನಾಯಿಗಳಿಗೆ ಉಚಿತವಾಗಿ ರೇಬಿಸ್ ನಿರೋಧಕ ಲಸಿಕೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಣಿ ಪ್ರಿಯರು ಹಲವು ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳನ್ನು ದತ್ತು ಪಡೆದಿದ್ದು, ಗಣ್ಯರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.