
ಪ್ರತಿಭಟನಾಕಾರರ ವಿರುದ್ಧದ ಎಫ್ಐಆರ್ಗಳನ್ನು ಹಿಂಪಡೆಯುವ ಭರವಸೆಯನ್ನು ಸರ್ಕಾರ ಈಡೇರಿಸದಿದ್ದರೆ ದೇಶಾದ್ಯಂತ ಮತ್ತೆ ಪ್ರತಿಭಟನೆ ನಡೆಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಎಚ್ಚರಿಕೆ ನೀಡಿದೆ.
ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳು ಪ್ರಕರಣಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದರೂ, ದೆಹಲಿ ಸೇರಿದಂತೆ ಹಲವು ಕಡೆ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಸಿಜೆಪಿ ಆರೋಪಿಸಿದೆ.
ಸುಪ್ರೀಂ ಕೋರ್ಟ್ನ ಇತ್ತೀಚಿನ ಆದೇಶವನ್ನು ಬಳಸಿಕೊಂಡು ಸರ್ಕಾರವು ವಿದ್ಯಾರ್ಥಿಗಳನ್ನು ಗುರಿಯಾಗಿಸುತ್ತಿದೆ ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ಕಳವಳ ವ್ಯಕ್ತಪಡಿಸಿದ್ದಾರೆ.