
ಕೊಲಂಬೊದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾದ ಪಸಿಂದು ಸೂರ್ಯಬಂಡಾರ ಎರಡನೇ ಇನ್ನಿಂಗ್ಸ್‌ನಲ್ಲಿ 92 ರನ್ ಗಳಿಸಿ ಶತಕದಂಚಿನಲ್ಲಿ ವಿಕೆಟ್ ಒಪ್ಪಿಸಿದರು.
ಪಸಿಂದು ಸೂರ್ಯಬಂಡಾರ ಅವರು ಮೊದಲ ಇನ್ನಿಂಗ್ಸ್‌ನಲ್ಲಿ 80 ರನ್ ಗಳಿಸಿ ಔಟಾಗಿದ್ದರು, ಇದೀಗ ಎರಡನೇ ಇನ್ನಿಂಗ್ಸ್‌ನಲ್ಲಿ ಮಾನವ್ ಸುತಾರ್ ಬೌಲಿಂಗ್‌ನಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಶತಕ ವಂಚಿತರಾದರು.
ಎರಡನೇ ಇನ್ನಿಂಗ್ಸ್‌ನ 11 ಮತ್ತು 13ನೇ ಓವರ್‌ಗಳಲ್ಲಿ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ನೀಡಿದ ಎರಡು ಜೀವದಾನಗಳ ಲಾಭ ಪಡೆದ ಪಸಿಂದು, ಅಂತಿಮವಾಗಿ 92 ರನ್ ಗಳಿಸಿ ತಂಡಕ್ಕೆ ಆಸರೆಯಾದರು.