
ಆಂಧ್ರಪ್ರದೇಶದ ವಿಜಯವಾಡದಲ್ಲಿ ಕಲ್ಯಾಣಿ ಎಂಬ ಮಹಿಳೆಯನ್ನು ಕೊಲೆ ಮಾಡಿ 9 ತುಂಡುಗಳಾಗಿ ಕತ್ತರಿಸಿ ಕಾಲುವೆಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ.
ಭವಾನಿಪುರಂನಲ್ಲಿ ಮಟನ್ ಅಂಗಡಿ ನಡೆಸುತ್ತಿದ್ದ ಶಫಿ ಎಂಬಾತ ಹಣದ ವಿವಾದ ಹಾಗೂ ಹಳೆಯ ವಿವಾದದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾನೆ.
ಮೃತದೇಹ ವಿಲೇವಾರಿ ಮಾಡಲು ಅಂಗಡಿಯ ನೌಕರ ಗುರುವುಲು ಸಹಾಯ ಮಾಡಿದ್ದು, ಇಬ್ಬರೂ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.