
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಅನಂತಗಿರಿ ಮಂಡಲದಲ್ಲಿ ರಸ್ತೆ ವಿಸ್ತರಣೆಗಾಗಿ ಬಂಡೆಗಳನ್ನು ಸ್ಫೋಟಿಸುವ ವೇಳೆ ಸಂಭವಿಸಿದ ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ.
ಜಿಲೆಟಿನ್ ಕಡ್ಡಿಗಳನ್ನು ಹೊಂದಿದ್ದ ವಿಶೇಷ ಸಾಧನದಲ್ಲಿ ತಾಂತ್ರಿಕ ದೋಷ ಉಂಟಾಗಿ ಈ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಎರಡು ವಾಹನಗಳು ಸಂಪೂರ್ಣವಾಗಿ ನಾಶವಾಗಿವೆ.
ಮೃತರನ್ನು ವಿಶಾಖಪಟ್ಟಣಂನ ಶಿಕ್ಷಕಿ ಸುನೀತಾ, ಕಾರ್ಮಿಕರಾದ ಮಣಿ, ನಾರಾಯಣರಾವ್ ಮತ್ತು ಪವನ್ ಕುಮಾರ್ ಎಂದು ಗುರುತಿಸಲಾಗಿದ್ದು, ಗೃಹ ಸಚಿವೆ ವಂಗಲಪುಡಿ ಅನಿತಾ ಸಂತಾಪ ಸೂಚಿಸಿದ್ದಾರೆ.