
ಪುಲಿಕೇಶಿನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟಕ್ಕೆ ಸಂಬಂಧಿಸಿದಂತೆ ಪುಲಿಕೇಶಿನಗರ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 61, 3(5) ಮತ್ತು ಸ್ಫೋಟಕ ವಸ್ತು ಕಾಯ್ದೆ 3, 5ರಡಿ ಎಫ್ಐಆರ್ ದಾಖಲಾಗಿದೆ.
ಅಕ್ಟೋಬರ್ 20ರಂದು ಮಧ್ಯಾಹ್ನ 2.30ರ ಸುಮಾರಿಗೆ ಸಂಭವಿಸಿದ ಈ ಸ್ಫೋಟದಲ್ಲಿ ಬ್ಯಾಟರಿ ಆನ್ ಮಾಡುವಾಗ ಅಲ್ಲಾವುದ್ದೀನ್ ಮತ್ತು ನರೇಶ್ ಎಂಬ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.
ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಬಾಂಬ್ ನಿಷ್ಕ್ರಿಯ ದಳ ಮತ್ತು ಭಯೋತ್ಪಾದನಾ ನಿರೋಧಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿದ್ದು, ತನಿಖೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ.