
ಕರ್ನಾಟಕದಲ್ಲಿ ಪಡಿತರ ಚೀಟಿದಾರರಿಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ ಮತ್ತೆ ಆರಂಭಗೊಂಡಿದ್ದು, ಅರ್ಹ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಸೈಬರ್ ಕೇಂದ್ರಗಳ ಮೂಲಕ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅಧಿಕೃತ ವೆಬ್ಸೈಟ್ ಮೂಲಕ ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಮತ್ತು ಫೋಟೋ ಬದಲಾವಣೆ ಸೇರಿದಂತೆ ವಿವಿಧ ತಿದ್ದುಪಡಿಗಳನ್ನು ಮಾಡಿಕೊಳ್ಳಬಹುದಾಗಿದೆ.