
ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು 2026-27ನೇ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗಾಗಿ ಸಾಂದೀಪನಿ ಶಿಷ್ಯವೇತನ ಯೋಜನೆಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಇಡಬ್ಲ್ಯೂಎಸ್ ಪ್ರಮಾಣಪತ್ರ ಹೊಂದಿರಬೇಕು ಮತ್ತು ಆಧಾರ್ಗೆ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ಲಿಂಕ್ ಆಗಿರಬೇಕು.
ಆಸಕ್ತರು www.ksbdb karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ 8029605888 ಅಥವಾ 8762249230 ಸಂಖ್ಯೆಯನ್ನು ಸಂಪರ್ಕಿಸಬಹುದು.