
ಅಕ್ಟೋಬರ್ 30ರಿಂದ ನವೆಂಬರ್ 1ರವರೆಗೆ ನಡೆಯಲಿರುವ ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಗೆ ಪ್ರಕಟಿಸಲಾಗಿದ್ದ ಭಾರತ ತಂಡದ ನಾಯಕತ್ವದಿಂದ ಭುವನೇಶ್ವರ್ ಕುಮಾರ್ ಹೊರಗುಳಿದಿದ್ದಾರೆ.
ನ್ಯೂಜಿಲೆಂಡ್ ಪ್ರವಾಸಕ್ಕೆ ಭಾರತೀಯ ರಾಷ್ಟ್ರೀಯ ತಂಡಕ್ಕೆ ಭುವನೇಶ್ವರ್ ಕುಮಾರ್ ಆಯ್ಕೆಯಾಗಿರುವ ಕಾರಣ, ಅವರ ಬದಲಿಗೆ ಆಲ್ ರೌಂಡರ್ ಕೃನಾಲ್ ಪಾಂಡ್ಯಗೆ ಭಾರತ ತಂಡದ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ.
ಟೂರ್ನಿಯಲ್ಲಿ ಭುವನೇಶ್ವರ್ ಕುಮಾರ್ ಅವರ ಬದಲಿಗೆ ಗುಜರಾತ್ ಟೈಟನ್ಸ್ ತಂಡದ ವೇಗಿ ಕುಲ್ವಂತ್ ಖೇಜ್ರೋಲಿಯಾ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.