
ಭಾರತೀಯ ಹವಾಮಾನ ಇಲಾಖೆ ವರದಿ ಪ್ರಕಾರ ಶನಿವಾರ ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗಲಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 20ರಿಂದ 24ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಘಟ್ಟ ಪ್ರದೇಶಗಳಲ್ಲಿ ಭೂಕುಸಿತದ ಭೀತಿಯಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.