
ಕರ್ನಾಟಕದಲ್ಲಿ ಖಾಲಿ ಇರುವ 2.84 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (AKSSA) ನಿರಂತರ ಹೋರಾಟ ನಡೆಸುತ್ತಿದೆ.
ಕಳೆದ ವರ್ಷ ಸೆಪ್ಟೆಂಬರ್ 25ರಂದು ಧಾರವಾಡದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ 8 ರಿಂದ 10 ಸಾವಿರ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ನಗರದ ಜನಜೀವನವನ್ನು ಸ್ತಬ್ಧಗೊಳಿಸಿದ್ದರು.
ಹೈಕೋರ್ಟ್ ನಿರ್ದೇಶನದ ಮೇರೆಗೆ ಸಂಘಟನೆಯ ಅಧ್ಯಕ್ಷ ಕಾಂತ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದರೂ, ಕೇವಲ ಬೆರಳಣಿಕೆಯಷ್ಟು ಹುದ್ದೆಗಳು ಮಾತ್ರ ಭರ್ತಿಯಾಗಿವೆ ಎಂದು ಸಂಘಟನೆ ಆರೋಪಿಸಿದೆ.