
ಬಿಹಾರದ ಜಮುಯಿಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದ ಪ್ರಮುಖ ಆರೋಪಿಗಳಾದ ನಂದನ್ ಕುಮಾರ್ ಮತ್ತು ಹರೇರಾಮ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸೆಪ್ಟೆಂಬರ್ 19ರಂದು ನಡೆದಿದ್ದ ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಆರೋಪಿಗಳನ್ನು ಬಂಧಿಸಲು ತೆರಳಿದ ವೇಳೆ ಅವರು ಪೊಲೀಸರ ಮೇಲೆ ದಾಳಿಗೆ ಯತ್ನಿಸಿ ತಪ್ಪಿಸಿಕೊಳ್ಳಲು ಹೋದಾಗ, ಆತ್ಮರಕ್ಷಣೆಗಾಗಿ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.