
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರಗೊಂಡು 'ಅರ್ನಾಬ್ ಚಂಡಮಾರುತ'ವಾಗಿ ಬದಲಾಗಿದ್ದು, ದಕ್ಷಿಣ ಭಾರತದ ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 28ರ ಮುಂಜಾನೆ ಅಥವಾ ಮಧ್ಯಾಹ್ನದ ಒಳಗೆ ಆಂಧ್ರಪ್ರದೇಶ ಮತ್ತು ಯಾನಂ ಕರಾವಳಿ ಪ್ರದೇಶಗಳಿಗೆ ಚಂಡಮಾರುತ ಅಪ್ಪಳಿಸಲಿದ್ದು, ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 140 ಕಿ.ಮೀ.ವರೆಗೆ ತಲುಪಬಹುದು.
ಚಂಡಮಾರುತದ ಪ್ರಭಾವದಿಂದ ಆಂಧ್ರಪ್ರದೇಶ, ಒಡಿಶಾ ಮತ್ತು ತೆಲಂಗಾಣ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗಲಿದ್ದು, ಮೀನುಗಾರರು ಕರಾವಳಿ ಭಾಗದಲ್ಲಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.