
ಬೆಂಗಳೂರು-ಮೈಸೂರು ಇನ್&zwnj ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP) ಯೋಜನೆಯಲ್ಲಿ ನೈಸ್ ಸಂಸ್ಥೆ ಎಸಗಿರುವ ಅಕ್ರಮಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
1997ರ ಏಪ್ರಿಲ್ 3ರಂದು ಮಾಡಿಕೊಂಡ ಒಪ್ಪಂದದ ಪ್ರಕಾರ 20,193 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದರೂ, 23 ವರ್ಷ ಕಳೆದರೂ ರೈತರಿಗೆ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ಭೂ ಬಳಕೆ ನಿಯಮಗಳ ಉಲ್ಲಂಘನೆ ಮತ್ತು ಟೋಲ್ ದರ ಪರಿಷ್ಕರಣೆಯಲ್ಲಿನ ಲೋಪಗಳ ಬಗ್ಗೆ ಪತ್ರದಲ್ಲಿ ಸುದೀರ್ಘವಾಗಿ ವಿವರಿಸಲಾಗಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.