
ತುಮಕೂರು ಜಿಲ್ಲೆಯ 11 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಸತಿ ರಹಿತರಿಗೆ ಶಾಶ್ವತ ಸೂರು ಕಲ್ಪಿಸಲು 192 ಎಕರೆ ಜಮೀನನ್ನು ಗುರುತಿಸಲಾಗಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರು-ರಾಯದುರ್ಗ ಮತ್ತು ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗಳಿಗೆ ಕ್ರಮವಾಗಿ 1,396 ಮತ್ತು 845 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಕಾಮಗಾರಿಗಳು ಡಿಸೆಂಬರ್ 2027ರ ವೇಳೆಗೆ ಪೂರ್ಣಗೊಳ್ಳಲಿವೆ.
ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ 10,151 ಎಕರೆಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು, 1,168 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ ಎಂದು ಸಚಿವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮಾಹಿತಿ ನೀಡಿದರು.