
ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ನಲ್ಲಿ ಪ್ರಿಯತಮೆಯನ್ನೇ ಕತ್ತು ಹಿಸುಕಿ ಬರ್ಬರವಾಗಿ ಕೊಲೆ ಮಾಡಿದ್ದ ಸಶಸ್ತ್ರ ಪಡೆ ಪೇದೆಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಅಥಣಿ ತಾಲೂಕಿನ ಅಡಳಹಟ್ಟಿ ಗ್ರಾಮದ ಬಸಪ್ಪ ಸಾತಣ್ಣವರ (29) ಹಾಗೂ ಹಾರೂಗೇರಿ ಗ್ರಾಮದ ರಕ್ಷಿತಾ ಸರಿಕರ್ (23) ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು.
ಮದುವೆ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದ ಹಿನ್ನೆಲೆಯಲ್ಲಿ ಅಕ್ಟೋಬರ್ 28ರಂದು ಕೊಲೆ ನಡೆದಿದ್ದು, ನವೆಂಬರ್ 1ರಂದು ಸಂಬಂಧಿಕರು ನಾಪತ್ತೆ ದೂರು ದಾಖಲಿಸಿದ್ದರು.