
2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕದಲ್ಲಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ರಾಜ್ಯದಿಂದ 1,15,500 ಮೆಟ್ರಿಕ್ ಟನ್ ಸೋಯಾಬೀನ್, 38,250 ಮೆಟ್ರಿಕ್ ಟನ್ ಹೆಸರುಕಾಳು ಹಾಗೂ 13,413 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಸಲಾಗುವುದು.
ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸಲು ಹಾಗೂ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ ಡಿಬಿಟಿ ಮೂಲಕ ನೇರವಾಗಿ ಹಣ ಪಾವತಿಸಲು ಈ ವ್ಯವಸ್ಥೆ ಸಹಕಾರಿಯಾಗಿದೆ.