
ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪತ್ನಿ ಡಾ. ಗುರುಪ್ರೀತ್ ಕೌರ್ ₹5 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ದೂರಿನ ಮೇಲೆ ಎನ್‌ಎಚ್‌ಆರ್‌ಸಿ ನೋಟಿಸ್ ಜಾರಿ ಮಾಡಿದೆ.
ಈ ಆರೋಪದ ಬಗ್ಗೆ ತನಿಖೆ ನಡೆಸಿ ಎರಡು ವಾರಗಳ ಒಳಗಾಗಿ ವರದಿ ಸಲ್ಲಿಸುವಂತೆ ಪಂಜಾಬ್ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಆಯೋಗವು ಸೂಚನೆ ನೀಡಿದೆ.
ಆರೋಪ ಸಂಬಂಧ ಗುರುಪ್ರೀತ್ ಕೌರ್ ಅವರು ಶನಿವಾರ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ವಕೀಲರ ಮೂಲಕ ನೋಟಿಸ್ ಕಳುಹಿಸಿದ್ದು, 24 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಗಡುವು ನೀಡಿದ್ದಾರೆ.