
ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ನಾರಾಯಣಿ ನದಿಯ ಒಡ್ಡು ಕುಸಿದು 3 ಡಜನ್ಗೂ ಹೆಚ್ಚು ಹಳ್ಳಿಗಳು ಜಲಾವೃತಗೊಂಡಿದ್ದು, ಸುಮಾರು 20,000ಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಸಿಲುಕಿದ್ದಾರೆ.
ನೇಪಾಳದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಗಂಡಕ್-ನಾರಾಯಣಿ ನದಿಯಲ್ಲಿ ನೀರಿನ ಮಟ್ಟ ದಿಢೀರ್ ಏರಿಕೆಯಾಗಿ ಯುಪಿ-ಬಿಹಾರ ಗಡಿಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.
ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ನದಿಯ ಹೂಳೆತ್ತುವ ಪ್ರಕ್ರಿಯೆ ಕೈಗೊಳ್ಳುವಂತೆ ಆದೇಶಿಸಿದ್ದಾರೆ.