
ಕಾಂಗೋದಲ್ಲಿ ಟ್ರೇಸೆಪ್ ಲೆಟ್ ಎಲ್-410 ವಿಮಾನ ಪತನಗೊಂಡ ಪರಿಣಾಮ ಮಿಲಿಟರಿ ಕೋರ್ಟ್ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮುಟೊಂಬೊ ಕಟಲಾಯಿ ಟಿಯೆಂಡೆ ಹಾಗೂ ಆಡಿಟರ್ ಜನರಲ್ ಲೆಫ್ಟಿನೆಂಟ್ ಜನರಲ್ ಬಕುಮಿ ಲಿಕುಲಿಯಾ ಸೇರಿದಂತೆ 14 ಮಂದಿ ಮೃತಪಟ್ಟಿದ್ದಾರೆ.
ವಿಮಾನವು ನೈರುತ್ಯ ಕಾಂಗೋದ ಕಿಕ್ವಿಟ್‌ನಿಂದ ರಾಜಧಾನಿ ಕಿನ್ಶಾಸಾಗೆ ಹಿಂದಿರುಗುತ್ತಿದ್ದ ವೇಳೆ ತಾಂತ್ರಿಕ ದೋಷದಿಂದಾಗಿ ಕೆಂಗೆ ಪ್ರದೇಶದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಯಾರೂ ಬದುಕುಳಿದಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಕಾಂಗೋ ಸೇನೆಯು ಈ ದುರ್ಘಟನೆಯನ್ನು ದೃಢಪಡಿಸಿದ್ದು, ಇಬ್ಬರು ಹಿರಿಯ ಸೇನಾಧಿಕಾರಿಗಳೊಂದಿಗೆ ನಿಯೋಗದ 12 ಸದಸ್ಯರು ಹಾಗೂ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವಕ್ತಾರ ಮೇಜರ್ ಜನರಲ್ ಎಫೋಮಿ ಎಕೆಂಗೆ ಮಾಹಿತಿ ನೀಡಿದ್ದಾರೆ.