
ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಆದಷ್ಟು ಬೇಗ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ ತಿಂಗಳಲ್ಲಿ ಮತದಾರರ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಸ್ಪಪಡಿಸಿದರು.
ಮತದಾರರ ಅಂತಿಮ ಪಟ್ಟಿ ಸಿದ್ಧಗೊಂಡ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳನ್ನು ನಡೆಸಲಾಗುವುದು ಎಂದು ಅವರು ತಿಳಿಸಿದರು.