Education
ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗುವೆ: ಅಣ್ಣಪ್ಪ ತರನಹಳ್ಳಿ

ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗುವೆ: ಅಣ್ಣಪ್ಪ ತರನಹಳ್ಳಿ

prajavani1h
THE BRIEF
1

ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರ ಹಕ್ಕುಗಳ ರಕ್ಷಣೆ ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಅಖಿಲ ಕರ್ನಾಟಕ ಶಿಕ್ಷಕರ ಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ಶಿವಶಂಕರ ಅಣ್ಣಪ್ಪ ತರನಹಳ್ಳಿ ತಿಳಿಸಿದ್ದಾರೆ.

2

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಲ್ಕು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, ಶಾಲಾ ಶಿಕ್ಷಕರಿಗೆ ವೇತನಾನುದಾನ ದೊರಕಿಸಿಕೊಡಲು ಮೂರು ದಶಕಗಳಿಂದ ಹೋರಾಟ ನಡೆಸಿರುವುದಾಗಿ ಹೇಳಿದರು.

3

ಶಿಕ್ಷಣ, ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿನ ತಮ್ಮ ಅನುಭವವನ್ನು ಪರಿಗಣಿಸಿ ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಪರವಾಗಿ ಧ್ವನಿ ಎತ್ತಲು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸುವಂತೆ ಅವರು ಮನವಿ ಮಾಡಿದರು.