
ಏಷ್ಯನ್ ಟೇಬಲ್ ಟೆನಿಸ್ ಚಾಂಪಿಯನ್‌ಷಿಪ್‌ನ ಮಿಶ್ರ ಡಬಲ್ಸ್ ವಿಭಾಗದಲ್ಲಿ ಹರ್ಮೀತ್ ದೇಸಾಯಿ ಮತ್ತು ಯಶಸ್ವಿನಿ ಘೋರ್ಪಡೆ ಜೋಡಿ ಸೆಮಿಫೈನಲ್ ಪ್ರವೇಶಿಸಿದೆ.
ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಈ ಭಾರತೀಯ ಜೋಡಿಯು 3–2 ಅಂತರದಿಂದ ದಕ್ಷಿಣ ಕೊರಿಯಾದ ಪಾರ್ಕ್ ಗಂಗ್‌ಹಿಯಾನ್ ಮತ್ತು ಲೀ ಡೇಯುನ್ ಅವರನ್ನು ಸೋಲಿಸಿದೆ.
ಈ ಗೆಲುವಿನ ಮೂಲಕ ಮಿಶ್ರ ಡಬಲ್ಸ್ ವಿಭಾಗದಲ್ಲಿ ಬರೋಬ್ಬರಿ 72 ವರ್ಷಗಳ ಬಳಿಕ ಭಾರತಕ್ಕೆ ಪದಕ ಖಚಿತವಾಗಿದೆ.