
ತೆಲಂಗಾಣದ ಇಬ್ರಾಹಿಂಪಟ್ನಂ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಲ್ರೆಡ್ಡಿ ರಂಗಾ ರೆಡ್ಡಿ ಅವರು ಮಂಗಳವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಮಹಾಲಕ್ಷ್ಮೀ ಯೋಜನೆಯ ಪರಿಶೀಲನೆ ವೇಳೆ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಸ್ಸಿನಲ್ಲಿ ಸಂವಾದದ ವೇಳೆ 70 ವರ್ಷದ ಶಾಸಕರು ಪದೇ ಪದೇ ಮುಜುಗರಕ್ಕೆ ಒಳಗಾಗುತ್ತಿದ್ದ ಯುವತಿಯನ್ನು ಮುಟ್ಟಲು ಯತ್ನಿಸಿ ಸೊಂಟದ ಮೇಲೆ ಕೈ ಇಟ್ಟಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ಸಾರ್ವಜನಿಕವಾಗಿ ಮತ್ತು ರಾಜಕೀಯವಾಗಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ನೆಟಿಗರು ಹಾಗೂ ಸಾರ್ವಜನಿಕರು ಶಾಸಕರ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಸುರಕ್ಷತೆ ಮತ್ತು ವೈಯಕ್ತಿಕ ಗೌರವಕ್ಕೆ ಧಕ್ಕೆ ತಂದಿರುವ ಈ ಘಟನೆಯ ಕುರಿತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಪೊಲೀಸರಿಗೆ ದೂರು ನೀಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.