
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ಟಿಂಗ್ ಆಪರೇಷನ್ ಕೋಲಾಹಲ ಸೃಷ್ಟಿಯಾಗಿದ್ದು, ತಮ್ಮ ಹೆಸರೂ ಪ್ರಸ್ತಾಪವಾಗಿರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ತಮ್ಮನ್ನು ಟ್ರ್ಯಾಪ್ ಮಾಡಲು ಖಾಸಗಿ ಟೀಮ್ ಯತ್ನಿಸಿದೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರೆ, ಸಿದ್ದರಾಮಯ್ಯ ಸ್ಟಿಂಗ್ ಮಾಡುತ್ತಿರುವವರು ಯಾರು ಎಂಬುದು ಗೊತ್ತಾಗಬೇಕು ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸ್ಟಿಂಗ್ ಮಾಡ್ತಿದ್ದಾರೆ ಅನ್ನೋದು ಗೊತ್ತಿದೆ ಮತ್ತು ಯಾರು ಮಾಡ್ತಿದ್ದಾರೆ ಅನ್ನೋ ಸತ್ಯ ಹೊರಬರಬೇಕು ಎಂದು ತಿಳಿಸಿದ್ದಾರೆ.