
ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆ ವೇಳೆ ಡಿವೈಎಸ್ಪಿ ನೇಮಕಾತಿಯಲ್ಲೂ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಐಎಎಸ್ ಅಧಿಕಾರಿ ಜ್ಞಾನೇಂದ್ರ ಮತ್ತು ಬಸವರಾಜ ಕನ್ನಾಳೆ ಅವರನ್ನು ವಿಚಾರಣೆಗೊಳಪಡಿಸಿದಾಗ ಸ್ಫೋಟಕ ಅಂಶಗಳು ಬೆಳಕಿಗೆ ಬಂದಿದ್ದು, ಇಬ್ಬರ ನಡುವಿನ ಸಂಪರ್ಕ ದೃಢಪಟ್ಟಿದೆ.
2023-24ರಲ್ಲಿ ನಡೆದ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯ ಅಭ್ಯರ್ಥಿಗಳ ಜೊತೆ ಕನ್ನಾಳೆ ಫೋಟೋ ತೆಗೆಸಿಕೊಂಡಿರುವುದು ಮತ್ತು ಸತತ ಸಂಪರ್ಕದಲ್ಲಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.