
ಕರ್ನಾಟಕ ಸರ್ಕಾರವು 2026-27ನೇ ಸಾಲಿನ ಜೀವಜಲ ಯೋಜನೆಯಡಿ ಸಣ್ಣ ಹಾಗೂ ಅತಿ ಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲು ಅವಕಾಶ ಕಲ್ಪಿಸಿದೆ.
ಗ್ರಾಮಾಂತರ ಪ್ರದೇಶದವರಿಗೆ ₹98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ₹1.20 ಲಕ್ಷದೊಳಗಿನ ವಾರ್ಷಿಕ ಆದಾಯ ಮಿತಿಯಿರುವ, 2 ರಿಂದ 5 ಎಕರೆ ಜಮೀನು ಹೊಂದಿರುವ ರೈತರು ಅರ್ಹರಾಗಿದ್ದಾರೆ.
ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ ಸಂಪರ್ಕಿಸಬಹುದು.