
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ರೆಡ್ಮಿ ಮೊಬೈಲ್, ಸಿಮ್ ಕಾರ್ಡ್, ಪೆನ್ ಡ್ರೈವ್ ಮತ್ತು ಡೈರಿ ಪತ್ತೆಯಾಗಿವೆ.
ಪೆನ್ ಡ್ರೈವ್ನಲ್ಲಿ ಅಶ್ಲೀಲ ವಿಡಿಯೋಗಳಿವೆ ಎಂಬ ವರದಿಗಳನ್ನು ಎಲೆಕ್ಟ್ರಾನಿಕ್ಸ್ ಸಿಟಿ ಡಿಸಿಪಿ ಎಂ.ನಾರಾಯಣ ಅಲ್ಲಗಳೆದಿದ್ದು, ವಶಪಡಿಸಿಕೊಂಡ ವಸ್ತುಗಳನ್ನು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ಜೈಲು ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ತನಿಖೆ ನಡೆಸಲು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಜಿನೇಂದ್ರ ಖನಗಾವಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದಾರೆ.