
ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಹೇಳಿಕೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ಯಾವುದೇ ರಾಜ್ಯವು ಇನ್ನೊಂದು ರಾಜ್ಯದ ಆಂತರಿಕ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರ್ಕಾರವು ಕಾನೂನುಬದ್ಧವಾಗಿ ಪ್ರಕರಣದ ತನಿಖೆ ನಡೆಸಲಿದೆ ಎಂದು ತಿಳಿಸಿರುವ ಅವರು, ತಮಿಳುನಾಡು ನಾಯಕರು ತಮ್ಮ ರಾಜ್ಯದ ಕೆಲಸದತ್ತ ಗಮನ ಹರಿಸಲಿ ಎಂದು ತಿರುಗೇಟು ನೀಡಿದ್ದಾರೆ.